Breaking News

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದ್ದು, ಅದೃಷ್ಟವಶಾತ್ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Spread the love

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದ್ದು, ಅದೃಷ್ಟವಶಾತ್ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಾನ್ವೆಲ್ ಫಾರ್ಮ್ ಹೌಸ್‍ನಲ್ಲಿ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದೆ. ಈ ಹಾವು ವಿಷಕಾರಿ ಆಗಿರಲಿಲ್ಲ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೀಗಾಗಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಶನಿವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ನಟನನ್ನು ಚಿಕಿತ್ಸೆಗಾಗಿ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ನಂತರ ಬೆಳಗ್ಗೆ 9 ಗಂಟೆಗೆ ಅವರನ್ನು ಡಿಸ್ಚಾರ್ಜ್ ಮಾಡಲಾಗಿದ್ದು, ಈಗ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ.  ಸಲ್ಮಾನ್ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ