ಬೆಂಗಳೂರು: ಆಟೋದಲ್ಲಿ ವಿಲೀಂಗ್ ಮಾಡಲು ಹೋಗಿ ಸಂಭವಿಸಿದ ಅಪಘಾತದಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ಬಾಣಸವಾಡಿಯಲ್ಲಿ ನಡೆದಿದೆ. ಮುತ್ತು ಮೃತ ದುರ್ದೈವಿ.
ಮುತ್ತು ತನ್ನ ಸ್ನೇಹಿತರೊಂದಿಗೆ ಆಟೋದಲ್ಲಿ ತೆರಳಿದ್ದ, ಈ ವೇಳೆ ಮುತ್ತು ವೀಲಿಂಗ್ ಮಾಡಲು ಯತ್ನಿಸಿದ್ದು, ಆಟೋ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಮುತ್ತು ತಲೆಗೆ ಗಂಭೀರ ಗಾಯವಾಗಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಘಟನೆ ಸಂಬಂಧ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆಟೋ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಕುಡಿದ ಮತ್ತಿನಲ್ಲಿ ಆಟೋ ಚಾಲನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.