Breaking News

ರಾಜ್ಯದಲ್ಲಿ ‘ಶಾಲೆ ಹಂತದಲ್ಲಿಯೇ ‘ಮಕ್ಕಳಿಗೆ ಲಸಿಕೆ’ ನೀಡಿಕೆ – ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಕೇಂದ್ರ ಸರ್ಕಾರ ಜನವರಿ 3ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲು ಘೋಷಣೆ ಮಾಡಿದೆ. ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

ಶಾಲೆಗಳಲ್ಲಿ ಲಸಿಕೆ ಅಭಿಯಾನ ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದರು.

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳನ್ನು ಸಿದ್ಧಪಡಿಸುತ್ತಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಸಹ-ಅಸ್ವಸ್ಥತೆ ಹೊಂದಿರುವವರಿಗೆ ‘ಮುನ್ನೆಚ್ಚರಿಕೆ ಡೋಸ್’ ನೀಡಲು ಸಿದ್ಧತೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಜನವರಿ 1, 2022ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಕೋವಿನ್ ಆಪ್ ನಲ್ಲಿ ನೋಂದಣಿ ಆರಂಭಗೊಳ್ಳಲಿದೆ. ಈ ಮೂಲಕ ಮಕ್ಕಳ ಪೋಷಕರು ಜನವರಿ 1 ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಿಕೊಳ್ಳಬಹುದು.

ಈ ಬಗ್ಗೆ ಮಾಹಿತಿ ನೀಡಿರುವಂತ ಕೋವಿನ್ ಪ್ಲಾಟ್ ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್ ಶರ್ಮಾ ಅವರು, 15-18 ವರ್ಷ ವಯಸ್ಸಿನ ಮಕ್ಕಳು ಜನವರಿ 1 ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ನೋಂದಣಿ ಮಾಡಬಹುದಾಗಿದೆ. ಇಲ್ಲವೇ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆಯೂ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಕುಖ್ಯಾತ ಅಪರಾಧಿ ಸಲೀಂ ಸೌದಾಗರ ಬಂಧನ

Spread the love ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಕುಖ್ಯಾತ ಅಪರಾಧಿ ಸಲೀಂ ಸೌದಾಗರ ಬಂಧನ ಕರ್ನಾಟಕದಲ್ಲಿ ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಅಡಿ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ