Breaking News

ಅಕ್ರಮ 4.13 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು

Spread the love

ಬೆಂಗಳೂರು: ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದುಕೊಂಡಿದ್ದ 4.13 ಲಕ್ಷ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ. ಇದರಿಂದಾಗಿ ಸರ್ಕಾರಕ್ಕೆ ಪ್ರತಿವರ್ಷ 249 ಕೋಟಿ ರೂಪಾಯಿ ಉಳಿತಾಯವಾಗುತ್ತದೆ.

ಮೂರು ಹೆಕ್ಟೇರ್ ಗಿಂತ ಹೆಚ್ಚು ಜಮೀನು ಹೊಂದಿದವರು, ಸರ್ಕಾರಿ ನೌಕರರು, ಪಿಂಚಣಿ ಪಡೆಯುತ್ತಿರುವ ನಿವೃತ್ತರು ಹೀಗೆ ಅನೇಕ ಅನರ್ಹರು ಪಡೆದುಕೊಂಡಿದ್ದು, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುಗಳನ್ನು ರದ್ದು ಮಾಡಲಾಗಿದೆ.

ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಆಹಾರಧಾನ್ಯ ಪಡೆಯಲಾಗುತ್ತಿತ್ತು. ಇಂತಹವರನ್ನು ಪತ್ತೆಹಚ್ಚಿ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಪ್ರತಿ ತಿಂಗಳು 82.71 ಲಕ್ಷ ಕೆಜಿ ಅಕ್ಕಿ ಸೋರಿಕೆಗೆ ತಡೆ ಹಾಕಲಾಗಿದೆ. ಇದರಿಂದಾಗಿ ಸರ್ಕಾರಕ್ಕೆ 249 ಕೋಟಿ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಹೇಳಲಾಗಿದೆ


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ