Breaking News

ಉದ್ಯೋಗಕ್ಕಾಗಿ ಐಟಿಐ ವಿದ್ಯಾರ್ಥಿಗಳಿಂದ ನಕಲಿ ದಾಖಲೆ ಸಲ್ಲಿಕೆ

Spread the love

ಬೆಂಗಳೂರು: ರಾಜ್ಯದ ವಿವಿಧ ಐಟಿಐಗಳಲ್ಲಿ ವ್ಯಾಸಂಗ ಮಾಡಿದ್ದ 91 ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ದಾಖಲೆಗಳ ಪರಿಶೀಲನೆ ವೇಳೆ ದೃಢಪಟ್ಟಿದೆ.

ಈ ಸಂಬಂಧ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಜಂಟಿ ನಿರ್ದೇಶಕ ಬಿ.ಎಲ್‌.ಚಂದ್ರಶೇಖರ್‌ ಅವರು ಇದೇ 23ರಂದು ನಗರದ ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

‘ರಾಜ್ಯದ ವಿವಿಧೆಡೆಯಲ್ಲಿರುವ ಸರ್ಕಾರಿ ಏಜೆನ್ಸಿಗಳ ಮೂಲಕ 2017-18ನೇ ಸಾಲಿನಲ್ಲಿ ಸಾವಿರಾರು ಮಂದಿ ಉದ್ಯೋಗ ಬಯಸಿ ಅರ್ಜಿಗಳನ್ನು ಸಲ್ಲಿಸಿದ್ದರು. ಇವುಗಳ ಪರಿಶೀಲನೆಗಾಗಿ 2017ರ ಸೆಪ್ಟೆಂಬರ್‌ 12, 2018ರ ಜನವರಿ 31 ಹಾಗೂ ಜೂನ್‌ 23 ರಂದು ಸಮಿತಿಗಳನ್ನು ರಚಿಸಲಾಗಿತ್ತು. ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಒಟ್ಟು 91 ಮಂದಿ ನಕಲಿ ದಾಖಲೆಗಳನ್ನು ನೀಡಿರುವುದನ್ನು ಪತ್ತೆಹಚ್ಚಿದೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಎಲ್ಲಾ ವಿದ್ಯಾರ್ಥಿಗಳಿಗೂ ಸಮನ್ಸ್‌ ನೀಡಲಾಗಿದೆ. ನಕಲಿ ದಾಖಲೆಗಳನ್ನು ಪಡೆದಿದ್ದು ಹೇಗೆ ಎಂಬುದರ ಕುರಿತು ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.


Spread the love

About Laxminews 24x7

Check Also

ಘಟಪ್ರಭಾದಲ್ಲಿ ತಹಶೀಲ್ದಾರರಿಂದ ಸಮೀಕ್ಷೆ ಕಾರ್ಯ!

Spread the love ಘಟಪ್ರಭಾದಲ್ಲಿ ತಹಶೀಲ್ದಾರರಿಂದ ಸಮೀಕ್ಷೆ ಕಾರ್ಯ! ಘಟಪ್ರಭಾ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗುತ್ತಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ