Breaking News

ವಿಶ್ರಾಂತಿ ಪಡೆಯಿರಿ’ ಎಂಬ ಸ್ವಪಕ್ಷದ ಶಾಸಕರ ಸಲಹೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ: ಪಕ್ಷದ ರಾಜ್ಯ ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷದ ಸಂಘಟನೆ, ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತದೆ.

 

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತದೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಪ್ರೀತಿಯಿಂದ ಸಲಹೆ: ಶಾಸಕ ಎಂ.ಪಿ.ಕುಮಾರಸ್ವಾಮಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಅದಕ್ಕೆ ನನ್ನ ವಿಶ್ರಾಂತಿ ಬಗ್ಗೆ ಮಾತನಾಡಿದ್ದಾರೆ. ವರ್ಷಪೂರ್ತಿ ದಿನಾ 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ. 2023ಕ್ಕೆ ಬಿಜೆಪಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಈಗನಿಂದಲೇ ಅದನ್ನ ಆರಂಭಿಸಿದ್ದೇನೆ ಎಂದರು.

ಪಕ್ಷ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಸೇರಿದಂತೆ ಕೇಂದ್ರದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ‌. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳುತ್ತೇನೆ. ನಾವು ನಮ್ಮದೇ ಆದ ತಂಡವಿದೆ. ನಾವೆಲ್ಲಾ ಸೇರಿ ಸಾಮೂಹಿಕವಾಗಿ ಚುನಾವಣೆ ಎದುರಿಸುತ್ತೇವೆ ಎಂದರು.

ಬಿಡಿಎ ಭ್ರಷ್ಟಾಚಾರ ಎಸಿಬಿ ಕೇಸ್ ವಿಚಾರದ ಬಗ್ಗೆ ಮಾತನಾಡಿದ ಅವರು, ಕೆಲವೊಂದು ಅಂತರಿಕ ಪ್ರಸ್ತಾವನೆ ಕೇಳಿದ್ದಾರೆ. ಅನುಮತಿ ಸಿಕ್ಕ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ