ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಯಾಗಬೇಕಿದ್ದ ಸಮಾರಂಭ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರುವುದು ವಿಳಂಬವಾದ್ದರಿಂದ ಮಧ್ಯಾಹ್ನ ಉದ್ಘಾಟನೆಗೊಂಡಿತು.ಕಾರ್ಯಕಾರಿಣಿಗೆ ಚಾಲನೆಗೂ ಮುನ್ನ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಗೋಪೂಜೆ, ಧ್ವಜಾರೋಹಣ ನೆರವೇರಿಸಿದರು.ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್. ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ. ರಾಷ್ಟ್ರೀಯ ಉಪಾಧ್ಯಕ್ಷೆ ಅರುಣಾ,
ಸಚಿವರಾದ ಆರ್. ಅಶೋಕ್. ಎಸ್ ಟಿ ಸೋಮಶೇಖರ್, ಡಾ. ಸುಧಾಕರ, ಶಂಕರಪಾಟೀಲ ಮುನೇನಕೊಪ್ಪ, ಕೆ ಎಸ್ ಈಶ್ವರಪ್ಪ. ಎಂಟಿಬಿ ನಾಗರಾಜ, ಗೋವಿಂದ ಕಾರಜೋಳ, ಮಾಧುಸ್ವಾಮಿ. ಕೋಟಾ ಶ್ರೀನಿವಾಸ ಪೂಜಾರಿ,
ಸುನೀಲಕುಮಾರ್, ಸಂಸದ ಸದಾನಂದಗೌಡ, ಸಂಘಟನಾ ಕಾರ್ಯದರ್ಶಿ ಅರುಣಕುಮಾರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ, ಬೆಳಗಾವಿ ಪರಿಷತ್ ಸೋಲು, ಹಾನಗಲ್ ಉಪಚುನಾವಣೆ ಸೋಲು ಸೇರಿದಂತೆ ಸಿಎಂ ಬದಲಾವಣೆ ವಿಷಯಬಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸುವ ಸಾಧ್ಯತೆ ಇದೆ.