ಶಿವಮೊಗ್ಗ/ಹಾವೇರಿ,ಆ.24- ಕೃಷಿ ಹಾಗೂ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಸೊರಬ ತಾಲೂಕಿನ ಯಲವಾಳ ಗ್ರಾಮ ಹಾಗೂ ಹಾವೇರಿ ಜಿಲ್ಲಾ ಹಿರೇಕೆರೂರು ತಾಲೂಕಿನ ಚಿಕ್ಕಕೊಣತಿ ಗ್ರಾಮದ ಜಮೀನುಗಳಲ್ಲಿ 2020-21ನೇ ಸಾಲಿನ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು.
ಜಮೀನಿನಲ್ಲಿ ನಿಂತು ಬೆಳೆ ವಿವರ ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ ತಮ್ಮ ಭಾವಚಿತ್ರವನ್ನು ಆ್ಯಪ್ ಪ್ರಾತ್ಯಕ್ಷಿಕೆ ಮಾಡಿ ರೈತರಿಗೆ ಮಾದರಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರೈತನ ಬೆಳೆ ರೈತನ ಹಕ್ಕಾಗಿದೆ.
ಇದೇ ದೇಶದಲ್ಲಿ ಮೊದಲ ಬಾರಿಗೆ ರೈತನೇ ಸ್ವತಃ ತನ್ನ ಹೊಲದ ಸಮೀಕ್ಷೆ ನಡೆಸಿ ತಾನೇ ಪ್ರಮಾಣಪತ್ರ ನೀಡುವಂತಹ ಮಹತ್ವದ ಆ್ಯಪ್ ಇದಾಗಿದ್ದು, ರೈತರು ಆ್ಯಪ್ ಸಮೀಕ್ಷೆ ಬಗ್ಗೆ ಹೆಚ್ಚೆಚ್ಚು ಒಲವು ತೋರುತ್ತಿದ್ದಾರೆ ಎಂದರು.
ಈ ಬಾರಿಯ ರೈತ ಬೆಳೆ ಸಮೀಕ್ಷೆ ರೈತರ ಬೆಳೆಯ ಉತ್ಸವವೇ ಆಗಿದೆ.
ಸಮೀಕ್ಷೆಗೆ ದೊರೆತಿರುವ ಅಭೂತಪೂರ್ವ ಸ್ಪಂದನೆ ಕಂಡು ಇಂದಿನವರೆಗೆ ನಿಗದಿಗೊಳಿಸಲಾಗಿದ್ದ ರೈತ ಬೆಳೆ ಆ್ಯಪ್ ಸಮೀಕ್ಷೆಯ ಅವಯನ್ನು ಇನ್ನು ಸ್ವಲ್ಪದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಹೇಳಿದರು.