Breaking News

ಡಿ.31ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಫಿಕ್ಸ್ – ವಾಟಾಳ್ ನಾಗರಾಜ್

Spread the love

ಬೆಳಗಾವಿ: ಡಿಸೆಂಬರ್ 31ರಂದು ಕರ್ನಾಟಕ ಬಂದ್ ಈಗಾಗಲೇ ನಿಗದಿ ಪಡಿಸಲಾಗಿದೆ. ನಿಗದಿಯಂತೆ ಡಿಸೆಂಬರ್ 31ರಂದು ಕರ್ನಾಟಕ ಬಂದ್ ( Karnataka Bundh ) ನಡೆಸಲಾಗುತ್ತಿದೆ. ಕನ್ನಡಿಗರೆಲ್ಲರೂ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ( Vatal Nagaraj ) ಮನವಿ ಮಾಡಿದ್ದಾರೆ.

 

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕ ಬಂದ್ ನಿಗದಿಯಾಗಿ ಹೋಗಿದೆ. ಅದರಲ್ಲಿ ಬದಲಾವಣೆಯ ಮಾತೇ ಇಲ್ಲ. ಕರ್ನಾಟಕ ಬಂದ್ ಗೆ ಎಲ್ಲರೂ ಕೈಜೋಡಿಸಿ. ಡಿಸೆಂಬರ್ 31ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಫಿಕ್ಸ್ ಎಂಬುದಾಗಿ ಹೇಳಿದರು

 

ಮುಂದುವರೆದು ಮಾತನಾಡಿದಂತ ಅವರು ಡಿಸೆಂಬರ್ 31ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುತ್ತದೆ. ಆ ಬಳಿಕ ಸರ್ಕಾರಕ್ಕೆ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಮನವಿ ಪತ್ರವನ್ನು ನೀಡಲಾಗುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ನವೆಂಬರ್ ಕ್ರಾಂತಿ ಮಾಡಲು ಹೈಕಮಾಂಡ್ ಬಿಡಲ್ಲ: ಸಚಿವ ಸತೀಶ್ ಜಾರಕಿಹೊಳಿ

Spread the love ಬೆಂಗಳೂರು: ನವೆಂಬರ್ ಕ್ರಾಂತಿ ಎಲ್ಲ ಆಗಲ್ಲ. ಕ್ರಾಂತಿ ಆಗಲು ಹೈಕಮಾಂಡ್ ಬಿಡಬೇಕಲ್ವಾ?. ಹೈಕಮಾಂಡ್ ಹಾಗೆಲ್ಲ ಮಾಡೋಕೆ ಬಿಡಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ