Breaking News

ಕನ್ನಡಪರ ಸಂಘಗಳ ಒಕ್ಕೂಟದಲ್ಲೇ ಅಪಸ್ವರ; ಬಂದ್​ನಿಂದ ಹಿಂದೆ ಸರಿದ ಹಲವು ಬಣ

Spread the love

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಶುಕ್ರವಾರ ಕರೆ ನೀಡಿರುವ ‘ಕರ್ನಾಟಕ ಬಂದ್’ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಜತೆಗೆ ಕನ್ನಡಪರ ಸಂಘಟನೆಗಳಿಂದಲೇ ಅಪಸ್ವರ ವ್ಯಕ್ತವಾಗಿದ್ದು, ಬಂದ್ ರ್ಯಾಲಿಗೆ ಸೀಮಿತವಾಗುವ ಲಕ್ಷಣಗಳು ಗೋಚರಿಸಿವೆ.

ಕರ್ನಾಟಕ ರಕ್ಷಣ ವೇದಿಕೆಯ ಟಿ.ಎ.ನಾರಾಯಣಗೌಡ, ಜಯ ಕರ್ನಾಟಕ ಅಧ್ಯಕ್ಷ ಜಗದೀಶ್, ಹೋಟೆಲ್ ಉದ್ಯಮ, ಕ್ಯಾಬ್ ಚಾಲಕರು ಸೇರಿ ಹಲವು ಸಂಘ-ಸಂಸ್ಥೆಗಳು ಕರ್ನಾಟಕ ಬಂದ್​ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಸಹ ಬಂದ್ ಹಿಂಪಡೆಯಬೇಕು. ಎಂಇಎಸ್ ವಿರುದ್ಧ ಕಾನೂನಾತ್ಮಕ ಕ್ರಮದ ಭರವಸೆ ನೀಡಿದೆ.

ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ, ಬಂದ್ ಸಮಯ ಇದಲ್ಲ. ಡಿ.31ರ ಬದಲಾಗಿ ಬೇರೆ ದಿನ ನಿಗದಿ ಮಾಡಬೇಕೆಂದು ಮನವಿ ಮಾಡಿದ್ದಾರೆ. ಈ ಕುರಿತು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್​ಗೆ ಬಹಿರಂಗ ಪತ್ರ ಬರೆದು, ಬಂದ್ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ. ಮತ್ತೊಂದೆಡೆ ಕರ್ನಾಟಕ ರಕ್ಷಣ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಬಂದ್ ವಿರೋಧಿಸಿ ಮತ್ತು ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಗುರುವಾರ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಇದರಲ್ಲಿ 30ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಲಿದ್ದಾರೆ ಎಂದು ನಾರಾಯಣಗೌಡ ಹೇಳಿಕೆ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ವಾಟಾಳ್ ನಾಗರಾಜ್, ಶುಕ್ರವಾರ ಬಂದ್​ಗೆ ಕರೆ ನೀಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಒಕ್ಕೂಟದಲ್ಲಿ ಗುರುತಿಸಿಕೊಂಡಿರುವ ನಿರ್ವಪಕ ಸಾ.ರಾ.ಗೋವಿಂದು, ಬಂದ್​ಗೆ ವಿರೋಧ ಮಾಡುವವರು ಇದ್ದೇ ಇರುತ್ತಾರೆ. ಬಂದ್ ಮಾಡಿಯೇ ತೀರುತ್ತೇವೆ. ಈ ಸಂಬಂಧ ಗುರುವಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ಸೇರಿ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ