ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.ಜಿಲ್ಲೆಯ ಜಿಲ್ಲೆ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಂಗಳೂರು ಗಲಭೆಗೆ ಸಂಬಂಧ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಸಿ, ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಮ್ಮ ಸರ್ಕಾರದಲ್ಲಿ ಗೂಂಡಾಗಳಂತೆ ಧಮ್ಕಿ ಹಾಕುವ ಅವಕಾಶವಿಲ್ಲ. ಡಿಕೆಶಿ ಗೂಂಡಾ ಮನಸ್ಥಿತಿಯಿಂದ ಹೊರಬರಬೇಕು. ಇಲ್ಲದಿದ್ದರೆ ನಿಮಗೂ, ಪಕ್ಷಕ್ಕೂ ಕೆಟ್ಟ ಹೆಸರು ಎಂದರು.