ಮಂಗಳೂರು: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ.
ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್