Breaking News

ಸಂಕ್ರಾಂತಿ ಬಳಿಕ ಪ್ರಧಾನಿ ದೊಡ್ಡ ಬದಲಾವಣೆ ಮಾಡಲಿದ್ದಾರೆ ನನಗೆ ಪಕ್ಷದಿಂದ ಸಿಹಿ ಸುದ್ದಿ :ಯತ್ನಾಳ್

Spread the love

ವಿಜಯಪುರ: ಸಂಕ್ರಾಂತಿಯ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದ್ದು, ನನಗೆ ಪಕ್ಷದಿಂದ ಸಿಹಿ ಸುದ್ದಿ ಸಿಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವರಿಷ್ಠರು ಕ್ರಮ ಕೈಗೊಂಡಿದ್ದಾರೆ.

ಸರ್ಕಾರ, ಪಕ್ಷ ಮತ್ತು ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತಂತೆ ಪ್ರಧಾನಿ ಮತ್ತು ಗುಪ್ತಚರ ಇಲಾಖೆ ಗಮನಿಸುತ್ತಿದ್ದು, ಕೆಲವು ಸಚಿವರು ಕಚೇರಿಗೆ ಹೋಗುತ್ತಿಲ್ಲ ಎಂಬುದನ್ನು ಕೂಡ ಗಮನಿಸಿದೆ. ಸಂಕ್ರಾಂತಿ ಬಳಿಕ ಪ್ರಧಾನಿ ದೊಡ್ಡ ಬದಲಾವಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಗ್ರಾಪಂ ಅಭಿವೃದ್ಧಿಗೆ ಸದಸ್ಯರ ಸಹಕಾರ ಅತ್ಯಗತ್ಯ

Spread the loveಆನೇಕಲ್​ : ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಎಲ್ಲರೂ ನೀಡಿದ ಸಹಕಾರ ಕಾರಣ ಎಂದು ಹೆನ್ನಾಗರ ಗ್ರಾಪಂ ಅಧ್ಯಕ್ಷ ಕೆ.ವಿನಯ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ