Home / ರಾಜಕೀಯ / ಡಿಸೆಂಬರ್‌ 31, 2021 ರಿಂದ 15 ದಿನಗಳ ಕಾಲ ಚಳಿಗಾಲದ ರಜಾ ನೀಡಲಾಗುತ್ತಿದೆ.

ಡಿಸೆಂಬರ್‌ 31, 2021 ರಿಂದ 15 ದಿನಗಳ ಕಾಲ ಚಳಿಗಾಲದ ರಜಾ ನೀಡಲಾಗುತ್ತಿದೆ.

Spread the love

ಓಮಿಕ್ರಾನ್ ಒಳಗೊಂಡದಂತೆ ಕೋರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಬೆನ್ನಲ್ಲೆ ಚಳಿಗಾಲದಲ್ಲಿ ಶೀಲ ಹೆಚ್ಚಾಗುವ ದೃಷ್ಠಿಯಿಂದ ಶಾಲಾ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಯು.ಪಿ ಶಾಲೆಗಳು ಜನವರಿ 14 ರವರೆಗೆ ಬಂದ್ ಮಾಡಲು ಮುಂದಾಗಿದೆ.

ಡಿಸೆಂಬರ್‌ 31, 2021 ರಿಂದ 15 ದಿನಗಳ ಕಾಲ ಚಳಿಗಾಲದ ರಜಾ ನೀಡಲಾಗುತ್ತಿದೆ.

ಹೀಗಾಗಿ ರಾಜ್ಯದಾದ್ಯಂತ ಡಿಸೆಂಬರ್ 31 ರಿಂದ ಜನವರಿ 14 ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ನಿರ್ಧಾರವು 1 ರಿಂದ 8 ನೇ ತರಗತಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಒಟ್ಟಾರೆ ಭಾರತದಲ್ಲಿ 961 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚುತ್ತಿರುವ ಕೋವಿಡ್-19 ಸೋಂಕುಗಳು ಮತ್ತು ಒಮಿಕ್ರಾನ್ ಭಯದ ನಡುವೆ, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್‌ಗೆ ಪತ್ರ ಬರೆದಿದ್ದಾರೆ, ಕೋವಿಡ್ 19 ಪರೀಕ್ಷೆಯನ್ನು ಹೆಚ್ಚಿಸಲು, ವ್ಯಾಕ್ಸಿನೇಷನ್‌ನ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಲು ಹಾಗೂ ಆಸ್ಪತ್ರೆಗಳಲ್ಲಿ ಸೌಕರ್ಯಗಳನ್ನು ಬಲಪಡಿಸಲು ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಚಳಿಗಾಲದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಉತ್ತರ ಪ್ರದೇಶದ ಶಾಲಾ ಮಕ್ಕಳಿಗೆ 15 ದಿನಗಳ ಕಾಲ ರಜೆ ಘೋಷಿಸಲಾಗಿದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ