ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಹೊಸ ವರ್ಸದ ಸಂಭ್ರಮದಲ್ಲಿರುವ ವೇಳೆ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸುವ ಯೋಜನೆ ರೂಪಿಸಿದ್ದಾರೆ ಎಂದು ಸ್ವತಃ ಮುಂಬೈ ಪೊಲೀಸರೇ ಮಾಹಿತಿ ನೀಡಿದ್ದಾರೆ.
ದ ಕೆಲವು ದಿನಗಳ ಹಿಂದೆ ಕೇಂದ್ರ ಗುಪ್ತಚರ ಇಲಾಖೆ ಈ ಮಾಹಿತಿಯನ್ನು ಪಡೆದುಕೊಂಡಿದ್ದು, ಹೊಸ ವರ್ಷದ ಸಂಭ್ರಮವನ್ನು ಹಾಳು ಮಾಡುವ ನಿಟ್ಟಿನಲ್ಲಿ ಖಲಿಸ್ತಾನಿ ಭಯೋತ್ಪಾದಕರು ಈ ಬಾರಿ ಪ್ರಯತ್ನ ಪಡಲಿದ್ದಾರೆ. ಅದರೊಂದಿಗೆ ಶಂಕಿತನ ಕುರಿತಾಗಿ ಮಾಹಿತಿಯನ್ನೂ ಮುಂಬೈ ಪೊಲೀಸರೊಂದಿಗೆ ಹಂಚಿಕೊಂಡಿರುವ ಕಾರಣ, ಇಡೀ ಮುಂಬೈಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.