Breaking News

ಡಿಕೆಶಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್ : ಭಕ್ತರು ಅಂದ್ರೆ ಬಿಜೆಪಿ, ಆರ್​ಎಸ್ಎಸ್, ಡಿಕೆಶಿ ಕೂಡ ಆಗಿರಬಹುದು:

Spread the love

ಬೆಂಗಳೂರು: ಭಕ್ತರು ಅಂದ್ರೆ ಬಿಜೆಪಿ, ಆರ್​ಎಸ್ಎಸ್ ಕಾರ್ಯಕರ್ತರು ಆಗಿರಬಹುದು, ಡಿ.ಕೆ.ಶಿವಕುಮಾರ್ ಕೂಡ ಆಗಿರಬಹುದು ಎಂದು ಸಚಿವ ಕೋಟಾ ಶ್ರೀನಿವಾಸ್ ‌ಪೂಜಾರಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ​ಗೆ ತಿರುಗೇಟು ನೀಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ, ಆರ್​ಎಸ್​ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನು ಹಸ್ತಾಂತರಿಸುವ ಅಜೆಂಡಾ ಹೊಂದಿದೆ ಎಂಬ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿ, ಭಕ್ತರು ಅಂದ್ರೆ ಎಲ್ಲರೂ ಬರುತ್ತಾರೆ. ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಈ ಕುರಿತಾಗಿ ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ. ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬುದು ನಮ್ಮ ಚಿಂತನೆ ಎಂದರು.

ಕುಂದಾಪುರ ಕೊರಗ ಸಮುದಾಯದ‌ ಮೇಲೆ ಪೊಲೀಸ್ ದೌರ್ಜನ್ಯ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಉಡುಪಿ ಜಿಲ್ಲೆಯ ಕೋಟಾದಲ್ಲಿ ಗಿರಿಜನರ ಮೇಲೆ ಪೊಲೀಸರು ವಿನಾಕಾರಣ ಹಲ್ಲೆ ಮಾಡಿದ್ದರು. ಒಬ್ಬ ಪಿಎಸ್‌ಐ ಸಸ್ಪೆಂಡ್ ಆದರೂ, ಆರು ಜನರನ್ನು ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್‌ಪಿ ಮತ್ತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್‌ಟೇಬಲ್​​ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು ಎಂದು ವಿವರಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ