Breaking News

ಎಂಇಎಸ್ ನಿಷೇಧಕ್ಕೆ ಕರವೆ ಆಗ್ರಹ, ಜನಪ್ರನಿಧಿಗಳ ಭಾವಚಿತ್ರಗಳನ್ನ ದಹಿಸಿ ಅಸಮಾಧಾನ

Spread the love

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದು, ಎಂಇಎಸ್ ವಿರುದ್ಧ ದ್ವನಿ ಎತ್ತದ ಬೆಳಗಾವಿ ಶಾಸಕರನ್ನು ಹರಾಜು ಹಾಕಿ ಆಕ್ರೋಶ ವ್ಯಕ್ತಪಡಿಸಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದು, ಎಂಇಎಸ್ ನಿಷೇಧಕ್ಕೆ ರಾಜ್ಯ ಸರ್ಕಾರ ಮುಂದಾಗುವಂತೆ ಆಗ್ರಹಿಸಿದ್ದಾರೆ. ಕರವೇ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರವೇ ಕಾರ್ಯಕರ್ತರು ಸಿಎಂ ಬೊಮ್ಮಾಯಿ ಭೇಟಿ ಮಾಡಿ ಎಂಇಎಸ್ ನಿಷೇಧಕ್ಕೆ ಮನವಿ ಮಾಡಲು ಮುಂದಾಗಿದ್ದಾರೆ.

ಇನ್ನೊಂದೆಡೆ ಮೈಸೂರಿನಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಸಿಎಂ ಗೆ ಚಪ್ಪಲಿ ತೋರಿ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿವೆ. ಹುಬ್ಬಳ್ಳಿ-ಧಾರವಾಡದಲ್ಲಿಯೂ ಪ್ರತಿಭಟನೆ ತೀವ್ರಗೊಳಿಸಿರುವ ಕನ್ನಡಪರ ಸಂಘಟನೆಗಳು, ಎಂಇಎಸ್ ಪುಂಡಾಟ ಮೆರೆಯುತ್ತಿದ್ದರೂ ಈ ಬಗ್ಗೆ ಮಾತನಾಡದ ಬೆಳಗಾವಿ ಶಾಸಕರು, ಸಚಿವರನ್ನು ಹರಾಜು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಭಯ್ ಪಾಟೀಲ್, ಸೇರಿದಂತೆ ಜನಪ್ರನಿಧಿಗಳ ಭಾವಚಿತ್ರಗಳನ್ನು ಹರಾಜು ಹಾಕಿದ್ದು, ಬಳಿಕ ಅವರ ಭಾವಚಿತ್ರಗಳನ್ನು ದಹಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ