ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ ಪ್ರಯಾಣಿಕರಿಗೆ ಪಾಸಿಟಿವ್ ಬಂದಿದೆ.
ಇಂದು ಬೆಳಗ್ಗಿನ ಜಾವ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 9 ಮಂದಿಯಲ್ಲಿ ಸೋಂಕು ಕಾಣಿಸಿದೆ. ಇಂಗ್ಲೆಂಡ್ 5, ಅಮೆರಿಕ 2, ಘಾನಾ 1, ಸ್ಕಾಟ್ಲ್ಯಾಂಡ್ನಿಂದ ಬಂದ ಒಬ್ಬರಿಗೆ ಕೊರೊನಾ ಬಂದಿದೆ.