Breaking News

ರಾಜ್ಯದಲ್ಲಿ ಕೊರೋನಾ ಏರಿಕೆ, ಒಂದೇ ದಿನ 707 ಜನರಿಗೆ ಸೋಂಕು ಪತ್ತೆ

Spread the love

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ದಿಢೀರ್ ಏರಿಕೆ ಕಂಡಿದೆ. ಜಿಲ್ಲೆಗಳಲ್ಲಿ ಕೂಡ ಕೊರೋನಾ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳೂ ಕೂಡ ಹೆಚ್ಚಾಗಿವೆ.ಇಂದು ಒಂದೇ ದಿನ 707 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದು ದಿನ 565 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ.

104 ಜನ ಬಿಡುಗಡೆಯಾಗಿದ್ದು, 6846 ಸಕ್ರಿಯ ಪ್ರಕರಣಗಳಿವೆ.

252 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8223 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.61 ರಷ್ಟು ಇದೆ.

ಒಟ್ಟು ಪ್ರಕರಣಗಳ ಸಂಖ್ಯೆ 30,06,505 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,327 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,59,926 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ