Breaking News

ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆಗೆ ಹೋದ್ರೆ ಕಾಂಗ್ರೆಸ್ ಸಿಂಗಲ್ ಡಿಜಿಟ್​ಗೆ ಬರುತ್ತೆ: ಸಿಟಿ ರವಿ ವ್ಯಂಗ್ಯ

Spread the love

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಂಎಲ್​ಸಿ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಕಾಮನ್ ಮ್ಯಾನ್ ಆಗಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​​ ಸಿಂಗ್ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಬಳಿಕ ಮಹೇಶ ಟೆಂಗಿನಕಾಯಿ ಹೇಳಿಕೆ ನೀಡಿದ್ದಾರೆ. 2022ರ ಮಾರ್ಚ್​ 28, 29 ರಂದು ಬಿಜೆಪಿ ವಿಜಯನಗರ ಜಿಲ್ಲೆಯಲ್ಲಿ ಮುಂದಿನ ಕಾರ್ಯಕಾರಿಣಿಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಕಾರ್ಯಕಾರಣಿ ಸಭೆ ಮಾಡಿದಕ್ಕೆ‌ ಧನ್ಯವಾದಗಳನ್ನ ಹೇಳುತ್ತೆನೆ. ಹೊಸ ದಿಕ್ಸೂಚಿ ಕೊಡಲು ಈ ಸಭೆ ನಡೆದಿದೆ. ನಿನ್ನೆ ಮಧ್ಯಾಹ್ನ ಆರಂಭವಾದ ಕಾರ್ಯಕಾರಣಿ ಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ಮಾಡಲಾಗಿದೆ. ಮುಂಬರುವ ಮೂರು ತಿಂಗಳ ಅವದಿಯಲ್ಲಿ ಪಕ್ಷ ಸಂಘಟನೆಯನ್ನ ಮಾಡಬೇಕಿದೆ. 11 ಜನ ಎಂಎಲ್​ಸಿ, ಓರ್ವ ಶಾಸಕರಿಗೆ ಸತ್ಕಾರ ಮಾಡಲಾಗಿದೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.ಮುಂದಿನ ಕಾರ್ಯಕಾರಣಿ ಸಭೆ ಮಾರ್ಚ 28, 29 ರಂದು ವಿಜಯ ನಗರ ಜಿಲ್ಲೆಯಲ್ಲಿ ಮಾಡಲಾಗುವುದು. 150 ಪ್ಲಸ್ ಘೋಷವ್ಯಾಕ್ಯದಿಂದ ನಮ್ಮ ಪಕ್ಷ ಕೆಲಸ ಮಾಡುತ್ತೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವಿಸ್ತಾರಕರನ್ನ ನೇಮಕ ಮಾಡಲಾಗುತ್ತೆ. ಈ ಕಾರ್ಯಕಾರಣಿ ಸಭೆಯಲ್ಲಿ ಒಳ್ಳೆಯ ರಿಸ್ಪಾನ್ಸ್ ಸಿಕ್ಕಿದೆ. ಈ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಎಲ್ಲರಿಗೂ ಧನ್ಯವಾದ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ