Breaking News

ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತ್ತು ಮಾಡುವಂತೆ ಒತ್ತಾಯ; ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Spread the love

ಹಾವೇರಿ: ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತ್ತು ಅಥವಾ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿರಿ ಗ್ರಾಮಸ್ಥರು ಪ್ರತಿಭಟನೆ (Protest) ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದಲ್ಲಿ ನಡೆದಿದೆ. ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ಅವರು ಶಾಲೆಗೆ (School) ಸರಿಯಾಗಿ ಬರುವುದಿಲ್ಲ. ಹೀಗಾಗಿ ಅಮಾನತ್ತು ಮಾಡಿ ಎಂದು ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ.

ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ವಿರುದ್ಧ ಶಾಲೆಗೆ ಸರಿಯಾಗಿ ಬರುವುದಿಲ್ಲ ಹಾಗೂ ಶಾಲೆಗೆ ಮದ್ಯಪಾನ ಮಾಡಿ ಬರುತ್ತಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಸಮಯಕ್ಕೆ ಸರಿಯಾಗಿ ಶಾಲೆಗೆ ಬಾರದೆ ಮನಸ್ಸೋ ಇಚ್ಛೆ ಶಾಲೆಗೆ ಬರುವ ಇಂತಹ ಮುಖ್ಯೋಪಾಧ್ಯಾಯರು ನಮ್ಮ ಶಾಲೆಗೆ ಬೇಡ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ.

ಕೆಲವು ವರ್ಷಗಳಿಂದ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿರುವ ಫಕ್ಕೀರಪ್ಪ ಬಾಲಹನುಮಣ್ಣನವರ ಅವರನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಬಂದು ಅಮಾನತ್ತು ಅಥವಾ ವರ್ಗಾವಣೆಯ ಆದೇಶ ನೀಡಬೇಕು ಅಲ್ಲಿಯವರೆಗೂ ನಾವು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮೈಸೂರು: 75 ಲಕ್ಷ ರೂಪಾಯಿ ಮೌಲ್ಯದ ಮನೆ ಮುಡಾ ವಶಕ್ಕೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 75 ಲಕ್ಷ ರೂಪಾಯಿ ಮೌಲ್ಯದ ಮನೆ ವಶಪಡಿಸಿಕೊಂಡಿದೆ. ಆರ್ಥಿಕ ದುರ್ಬಲ ವರ್ಗದವರಿಗೆ ನಿರ್ಮಿಸಲಾಗಿದ್ದ ಮನೆಯಲ್ಲಿ 15 ವರ್ಷಗಳಿಂದ ಕುಮಾರ್ ಅನಧಿಕೃತವಾಗಿ ವಾಸವಾಗಿದ್ದಾರೆ. ಅಲ್ಲದೇ ರಾಮಕೃಷ್ಣನಗರ ಇ ಬ್ಲಾಕ್ ಬಡಾವಣೆಯ ಎಂಐಜಿ ಮನೆಯನ್ನು ರಘು ಎಂಬುವವರಿಗೆ 8 ಸಾವಿರ ರೂಪಾಯಿಗೆ ಬಾಡಿಗೆಗೆ ನೀಡಿದ್ದರು. ಹೀಗಾಗಿ ಈ ವಿಷಯ ತಿಳಿಯುತ್ತಿದ್ದಂತೆ ಸರಸ್ವತಿಪುರಂ ಪೊಲೀಸರ ಸಹಕಾರದಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮನೆ ವಶಕ್ಕೆ ಪಡೆದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ.ನಟೇಶ್‌ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ