ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ಸಂಸ್ಥೆ (BMTC) ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳ ಬಸ್ ಪಾಸ್ ಗಳ ಅವಧಿಯನ್ನು ಜನವರಿ 15 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳು 2021-22 ನೇ ಸಾಲಿನ ಶುಲ್ಕ ರಶೀದಿ ಅಥವಾ ಗುರುತಿನ ಚೀಟಿಯೊಂದಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
1 ರಿಂದ 10 ನೇ ತರಗತಿ, ಪಿಯುಸಿ, ಐಟಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು ಹಾಗೂ ಪಿಎಚ್ ಡಿ ವಿದ್ಯಾರ್ಥಿಗಳಿಗೆ 2021 ನವೆಂಬರ್ 14 ರಿಂದ ಪಾಸ್ ಗಳನ್ನು ವಿತರಣೆಮಾಡಲಾಗುತ್ತಿದೆ.