ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕೆತ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಮಾಹಿತಿಯ 2022ರ ಜನವರಿ 10 ರೊಳಗೆ ಸಲ್ಲಿಸಬೇಕು.
ಅರ್ಜಿಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-581325 ಈ ವಿಳಾಸಕ್ಕೆ ಹಾಗೂ ಪೋನ್ ಸಂಖ್ಯೆ 08284-298547, 9449782425, 96632143217, ಈ ವಿಳಾಸಕ್ಕೆ ತಲುಪಿಸಬಹುದು ಅಥವಾ ವಾಟ್ಸಪ್ ಮೂಲಕವು ಸಲ್ಲಿಸಬಹುದಾಗಿದೆ.ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.