ಬೆಳಗಾವಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುತ್ತಿದ್ದ ಬಸ್ ಅನ್ನು ಬೆಳಗಾವಿ ಪೊಲೀಸರು ವಾಪಸ್ ಕಳುಹಿಸಿದ್ದಾರೆ.
ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಖಾಸಗಿ ಬಸ್ ಅನ್ನು ವಾಪಸ್ ಕಳುಹಿಸಲಾಗಿದೆ.
ಖಾಸಗಿ ಬಸ್ ಪುಣೆಯಿಂದ ಬೆಳಗಾವಿಗೆ ಬರುತ್ತಿತ್ತು. ರಾಜ್ಯದಲ್ಲಿ ಕೊರೊನಾ ಹಾಗೂ ಒಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಜಿಲ್ಲಾಡಳಿತದ ವತಿಯಿಂದ ಹೈಅಲರ್ಟ್ ಮಾಡಲಾಗಿದೆ.