ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ (Delhi Chief Minister Arvind Kejriwal) ಕೊರೊನಾ ಸೋಂಕು (Corona infection) ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಅರವಿಂದ ಕೇಜ್ರಿವಾಲ್, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.