ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ನಾನು ಶಾಸಕನಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳಿಂದ ನಮ್ಮೂರಿನ ಜನರು ನಮ್ಮಗೆ ಆಶಿವಾರ್ದ ಮಾಡಿದ್ದಾರೆ ಎಂದು ಶಾಸಕ ಗಣೇಶ ಹುಕ್ಕೇರಿ ತಿಳಿಸಿದರು…
ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಳೆದ 40 ವರ್ಷ ರಾಜಕೀಯದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ನಾನು ಶಾಸಕನಾಗಿ ಯಕ್ಸಂಬಾ ಗ್ರಾಮದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಹಾಗೂ ಕಳೆದ ಅವಧಿಯಲ್ಲಿ ಬಿಜೆಪಿಯ ದುರಾಡಳಿತಕ್ಕೆ ಬೇಸತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಆಶಿವಾರ್ದ ಮಾಡಿದ್ದಾರೆ.. ಮುಂಬರುವ ದಿನಗಳಲ್ಲಿ ಯಕ್ಸಂಬಾ ಪಟ್ಟಣವನ್ನು ಹೈಟೆಕ್ ಪಟ್ಟಣವನ್ನಾಗಿ ಮಾಡುವೆ ಹಾಗೂ ನಮ್ಮ ನಾಯಕರಾದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಶಾಸಕ ಗಣೇಶ ಹುಕ್ಕೇರಿ ತಿಳಿಸಿದರು….