Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮ

Spread the love

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮ
ಗೋಕಾಕ : ಸತತ ಪರಿಶ್ರಮ, ಸ್ಪಷ್ಟ ಗುರಿ ಮತ್ತು ಉತ್ತಮ ಮಾರ್ಗದರ್ಶನವಿದ್ದರೆ ಮಾತ್ರ ಉತ್ತಮ ಸಾಧನೆಗೈಯಲು ಸಾಧ್ಯವಾಗುತ್ತದೆ ಎಂದು ಮೂಡಲಗಿ ತಹಶೀಲ್ದಾರ ದಿಲ್‍ಶಾದ್ ಮಹಾತ್ ಹೇಳಿದರು.
ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕಳೆದ ಶನಿವಾರದಂದು ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಮ್ಮ ಮುಂದಿನ ಜೀವನ ಉಜ್ವಲವಾಗಲಿ. ನಿಮ್ಮಿಂದ ಹೆಚ್ಚೆಚ್ಚು ಸಾಧನೆಗಳು ನಡೆದು ಕಲಿತಿರುವ ಶಾಲೆಗೆ ಕೀರ್ತಿ ತರುವಂತಾಗಲಿ ಎಂದು ಆಶಿಸಿದರು.
ಅಧ್ಯಕ್ಷತೆಯನ್ನು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ವಹಿಸಿ, ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೂಡಲಗಿ ವಲಯದ ವಿದ್ಯಾರ್ಥಿನಿ ಶೃತಿ ಪಾಟೀಲ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ವಲಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಮಲ್ಲಾಪೂರ ಪಿಜಿಯ ಶಾಲೆಯ ಕು.ಶೃತಿ ಬಿ.ಪಾಟೀಲ(623), ದ್ವಿತೀಯ ಸ್ಥಾನ ಪಡೆದಿರುವ ಕಲ್ಲೋಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸತ್ಯನಾರಾಯಣ ಖಂಡ್ರಟ್ಟಿ(621) ಹಾಗೂ ತೃತೀಯ ಸ್ಥಾನ ಗಳಿಸಿರುವ ಕು.ಅಕ್ಷತಾ ಸಾಯನ್ನವರ(617) ಅವರನ್ನು ಇದೇ ಸಂದರ್ಭದಲ್ಲಿ ಸತ್ಕರಿಸಲಾಯಿತು. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಾಧಕ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ.ಗಳ ನಗದು ಪುರಸ್ಕಾರ ನೀಡಿದರು.
ಈ ಸಂದರ್ಭದಲ್ಲಿ ನಿವೃತ್ತ ತಾಲೂಕಾ ಆರೋಗ್ಯಾಧಿಕಾರಿ ಡಾ.ಆರ್.ಎಸ್. ಬೆಣಚಿನಮರಡಿ, ಗೋಕಾಕ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಪಿಎಸ್‍ಐ ಎಚ್.ವಾಯ್. ಬಾಲದಂಡಿ, ಉದ್ಯಮಿ ಹಾಗೂ ಹಿರಿಯ ಪತ್ರಕರ್ತ ದಿಲೀಪ ಮಜಲಿಕರ, ಘಯೋಮನೀಬ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಎಪಿಎಂಸಿ ಅಧ್ಯಕ್ಷ ಶ್ರೀಪತಿ ಗಣೇಶವಾಡಿ, ಪ್ರಭಾಶುಗರ ನಿರ್ದೇಶಕರಾದ ಲಕ್ಷ್ಮಣ ಗಣಪ್ಪಗೋಳ, ಶಿವಲಿಂಗ ಪೂಜೇರಿ, ಉದ್ಯಮಿ ಬಸವರಾಜ ಹತ್ತರಕಿ, ರಾಜಾಪೂರ ಪಿಕೆಪಿಎಸ್ ಅಧ್ಯಕ್ಷ ಬಸವಂತ ಕಮತಿ, ಎಂಡಿಆರ್‍ಎಸ್ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಗಂಗರಡ್ಡಿ, ಬಸವರಾಜ ಕಸ್ತೂರಿ, ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ