Breaking News

ಕೇರಳ, ಮಹಾರಾಷ್ಟ್ರ, ಗೋವಾ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಕ್ರಮ ಜಾರಿ

Spread the love

ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಸೇರಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಾಗಿದೆ. ಇದೇ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹಲವು ನಿಯಮಗಳನ್ನು ಸೂಚಿಸಿದೆ. ಕೇರಳ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್ ಲಸಿಕೆ ಪಡೆದಿದ್ದರೂ/ ಪಡೆಯದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.

 

ವಾರಾಂತ್ಯದ ಕರ್ಫ್ಯೂ ದಿನಂದು ಜನದಟ್ಟಣೆ ಗಮನದಲ್ಲಿರಿಸಕೊಂಡು ಅವಶ್ಯಕತೆಗೆ ಅನುಗುಣವಾಗಿ ಸಾರಿಗೆ ಕಾರ್ಯಾಚರಣೆ ನಡೆಸುವುದು.ಸಾಧ್ಯವಾದಷ್ಟು ಮಟ್ಟಿಗೆ ರಾತ್ರಿ ಸಾರಿಗೆ ಸೇವೆಗಳನ್ನು ಆನ್ ಲೈನ್ ಬುಕಿಂಗ್ ವ್ಯವಸ್ಥೆಯಲ್ಲಿ ಅಳವಡಿಸುವುದು.

ಚಾಲನಾ ಸಿಬ್ಬಂದಿ ಮತ್ತು ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೋವಿಡ್ ಸೋಂಕು ಹರಡದಂತೆ ಮಾರ್ಗಸೂಚಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.


Spread the love

About Laxminews 24x7

Check Also

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

Spread the love ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ