Breaking News

ಕ್ಲಬ್‍ಗಳಲ್ಲಿ ಎಣ್ಣೆ ಇಲ್ಲದೆ ಮೋಜು ಮಾಡಬಹುದು

Spread the love

ಬೆಂಗಳೂರು: ಸಾಮಾಜಿಕ ಕಬ್‍ಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ನಿರ್ಬಂಧಗಳನ್ನು ಹೇರಿದೆ.ಅಂತರಾಜ್ಯ ಪ್ರಯಾಣಿಕರು ರಾಜ್ಯಕ್ಕೆ ಪ್ರವೇಶಿಸಬೇಕಾದರೆ ಪಾಲಿಸಬೇಕಾದ ಕೊರೊನಾ ನಿಯಮಗಳಲ್ಲಿ ಸಹ ರಾಜ್ಯಸರ್ಕಾರ ಸಡಿಲಿಕೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಕ್ಲಬ್‍ಗಳನ್ನು ತೆರೆಯಲು ಸಹ ಅನುಮತಿ ನೀಡಿದೆ. ಕ್ಲಬ್ ಗಳಲ್ಲಿ ಮೇಜಿನ ಮೇಲೆ ಆಹಾರ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ನೀಡಲಾಗಿದ್ದು, ಸಾಮಾಜಿಕ ಕ್ಲಬ್ ಗಳಲ್ಲಿ ಮದ್ಯ ಸರಬರಾಜನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಲ್ಲದೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸೋಟ್ರ್ಸ್ ಕಾಂಪ್ಲೆಕ್ಸ್ ಮತ್ತು ಸ್ಟೇಡಿಯಂಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಸಹ ಅನುಮತಿ ನೀಡಲಾಗಿದೆ. ಪ್ರೇಕ್ಷಕರಿಲ್ಲದೆ ಕ್ರೀಡಾ ಚಟುವಟಿಕೆಗಳನ್ನು ಪುನರಾರಂಭಿಸಬಹುದು ಎಂದು ಸರ್ಕಾರ ತಿಳಿಸಿದೆ. ಯಾವುದೇ ಕ್ರೀಡಾ ಚಟುವಟಿಕೆಗೆ ಪ್ರೇಕ್ಷರು ಭಾಗವಹಿಸುವಂತಿಲ್ಲ ಎಂದು ಹೇಳಲಾಗಿದೆ.

ಈಜುಕೊಳ, ಮನೋರಂಜನಾ ಸ್ಥಳಗಳು, ಉದ್ಯಾನವನ, ಚಿತ್ರಮಂದಿರಗಳು, ಬಾರ್ ಗಳು, ಸಭಾಂಗಣ, ಅಸೆಂಬ್ಲಿ ಹಾಲ್‍ಗಳಿಗೆ ಹೇರಿದ್ದ ನಿರ್ಬಂಧವನ್ನು ಮುಂದುವರಿಸಲಾಗಿದೆ. ಅಲ್ಲದೆ ಸಾಮಾಜಿಕ, ರಾಜಕೀಯ , ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳ ನಿರ್ಬಂಧವನ್ನು ಸಹ ಮುಂದುವರಿಸಲಾಗಿದೆ.

 


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ