ತುಮಕೂರು : ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಸಿಕೊಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ಅಕ್ರಮ-ಸಕ್ರಮ ಅಂತಿಮಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಸಕ್ರಮ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಪೌರಾಡಳಿತ, ಕಾನೂನು ಸಚಿವರು ಹಾಗೂ ಒಳಗೊಂಡಂತೆ ಉಪ ಸಮಿತಿ ರಚಿಸಲಾಗಿಇದ್ದು, ಈಗಾಗಲೇ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಅಕ್ರಮ ಸಕ್ರಮದಿಂದ ಸರ್ಕಾರಕ್ಕೂ ಆದಾಯ ಬರುತ್ತದೆ. ಜನರಿಗೆ ಹೆಚ್ಚಿನ ಮೂಲ ಸೌಕರ್ಯ ಕಲ್ಪಿಸಿ ಕೊಡಬಹುದು ಎಂದು ಸಚಿವ ಬೈರತಿ ಬಸವರಾಜು ಹೇಳಿದ್ದಾರೆ.