Breaking News

ಜೋಡಿ ಹಳಿ ಕಾಮಗಾರಿಯಿಂದ ಸ್ಥಗಿತಗೊಂಡಿದ್ದ ರೈಲುಗಳ ಸಂಚಾರ ಇಂದಿನಿಂದ ಪುನಃ ಆರಂಭವಾಗಲಿದೆ.

Spread the love

ಬೆಂಗಳೂರು: ರಾಜಧಾನಿಯಿಂದ ಹುಬ್ಬಳ್ಳಿ ಮಾರ್ಗದಲ್ಲಿ ನಡೆಯುತ್ತಿದ್ದ ಜೋಡಿ ಹಳಿ ಕಾಮಗಾರಿಯಿಂದ ಸ್ಥಗಿತಗೊಂಡಿದ್ದ ರೈಲುಗಳ ಸಂಚಾರ ಇಂದಿನಿಂದ ಪುನಃ ಆರಂಭವಾಗಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ.

ಕೆಎಸ್‌ಆರ್ ಬೆಂಗಳೂರು- ಧಾರವಾಡ ಸೂಪರ್ ಫಾಸ್ಟ್ ಇಂಟರ್ ಸಿಟಿ ರೈಲು, ಧಾರವಾಡ – ಕೆಎಸ್‌ಆರ್ ಬೆಂಗಳೂರು ಸೂಪರ್ ಫಾಸ್ಟ್ ಇಂಟರ್ ಸಿಟಿ ರೈಲು ಮತ್ತು ಹೊಸಪೇಟೆ-ಕೆಎಸ್‌ಆರ್ ಬೆಂಗಳೂರು ವಿಶೇಷ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದೆ.

ವಾಸ್ಕೋಡಗಾಮ-ಯಶವಂತಪುರ ಎಕ್ಸ್‌ಪ್ರೆಸ್, ಮೈಸೂರು – ಬೆಳಗಾವಿ ಎಕ್ಸ್‌ಪ್ರೆಸ್ ರೈಲು ಸಂಚಾರ ಪುನಃ ಆರಂಭವಾಗುತ್ತಿದೆ. ಬೆಳಗಾವಿ ಶೇಡಬಾಳ ನಡುವೆ ಸಂಚಾರ ನಡೆಸುವ ವಿಶೇಷ ರೈಲಿನ ಸಂಚಾರ ಜ.7 (ಇಂದಿನಿಂದ) ರದ್ದಾಗಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ