Breaking News
Home / ರಾಜಕೀಯ / ವೀಕೆಂಡ್ ಕರ್ಫ್ಯೂಗೆ ಕೌಂಟ್‍ಡೌನ್, ಏನಿರುತ್ತೆ ಏನಿರಲ್ಲ..?

ವೀಕೆಂಡ್ ಕರ್ಫ್ಯೂಗೆ ಕೌಂಟ್‍ಡೌನ್, ಏನಿರುತ್ತೆ ಏನಿರಲ್ಲ..?

Spread the love

ಬೆಂಗಳೂರು,ಜ.7 – ರಾಜ್ಯದಲ್ಲಿ ಕೊರೋನಾ ವೈರಸ್, ಓಮಿಕ್ರಾನ್ ದಿನೇದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಇಡೀ ಕರ್ನಾಟಕದಲ್ಲಿ ವೀಕೆಂಡ್ ಕಫ್ರ್ಯೂ ಹೇರಿಕೆಯಾಗಿದ್ದು ಇಂದು ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಅನ್ವಯವಾಗುತ್ತದೆ.

ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಅತ್ಯವಶ್ಯಕ ಮತ್ತು ತುರ್ತು ಕಾರ್ಯಗಳನ್ನು ಹೊರತುಪಡಿಸಿ ಜನರ ಒಡಾಟವನ್ನು ಕಟ್ಟುನಿಟ್ಟಾಗಿ ನಿಷೇಸಲು ಜಿಲ್ಲಾಡಳಿತಗಳು ಕ್ರಮ ಕೈಗೊಂಡಿವೆ.

ತುರ್ತು, ಅತ್ಯವಶ್ಯಕ ಸೇವೆಗಳು ಮತ್ತು ಕೋವಿಡ್ ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತವೆ. ಅಕಾರಿಗಳು ಮತ್ತು ಸಿಬ್ಬಂದಿಗೆ ಓಡಾಟಕ್ಕೆ ಅವಕಾಶವಿದೆ.

ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ (ಜನವರಿ 7, 8, 14, 15) ಸಾಮಾನ್ಯ ಜನರಿಗೆ ಬಿಎಂಟಿಸಿ ಬಸ್ ಸೌಲಭ್ಯ ಲಭ್ಯವಿರುವುದಿಲ್ಲ. ಕೇವಲ ತುರ್ತು ಸಂದರ್ಭದಲ್ಲಿ ಮಾತ್ರ ಬಸ್‍ಗಳು ಸಂಚಾರ ನಡೆಸಲಿವೆ. ಅಗತ್ಯ ಸೇವೆಗಳನ್ನು ನೀಡುವ ಸಿಬ್ಭಂದಿ ಕಚೇರಿಗೆ ತೆರಳಲು ಮಾತ್ರ ಬಸ್ ಓಡಿಸಲಾಗುತ್ತದೆ. ಅಗತ್ಯ ಸೇವೆಗಳನ್ನು ಒದಗಿಸುವ ಸಿಬ್ಬಂದಿ ಕಚೇರಿಗೆ ಹೋಗಲು ಶೇ.10ರಷ್ಟು ಬಸ್‍ಗಳನ್ನು ಮಾತ್ರ ಓಡಿಸಲಾಗುತ್ತದೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಬಸ್ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳಿಗಾಗಿ ವಾರಾಂತ್ಯ ಕಫ್ರ್ಯೂ ಅವಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆ ತನಕ ಮಾತ್ರ ಬಸ್ ಸಂಚಾರ ಇರುತ್ತದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು. ಬೋರ್ಡ್/ ಕಾಪೆರ್ರೇಪೊಷನ್ ಸಿಬ್ಬಂದಿಗಳು, ಪೊಲೀಸ್, ಹೋಂ ಗಾರ್ಡ್, ಸಿವಿಲ್ ಡಿಫೆನ್ಸ್, ಅಗ್ನಿ ಶಾಮಕ ತುರ್ತು ಸೇವೆಗಳ ಸಿಬ್ಬಂದಿ ಬಸ್‍ನಲ್ಲಿ ಸಂಚಾರ ನಡೆಸಬಹುದಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ, ಲ್ಯಾಬ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇತರ ಸಿಬ್ಬಂದಿಗಳು. ಆಸ್ಪತ್ರೆಗೆ ತೆರಳುವ ರೋಗಿಗಳು ಮತ್ತು ಅವರನ್ನು ಚಿಕಿತ್ಸೆ, ಪರೀಕ್ಷೆಗೆ ಕರೆದುಕೊಂಡು ಹೋಗವವರು ಸಂಚಾರ ನಡೆಸಬಹುದು.

ಸರ್ಕಾರಿ/ ಖಾಸಗಿ ಬ್ಯಾಂಕ್, ವಿಮೆ ಕಂಪನಿಗಳ ಸಿಬ್ಬಂದಿಗಳು, ಅಧಿಕಾರಿಗಳ, ಮುದ್ರಣ ಮತ್ತು ದೃಶ್ಯ ಮಾಧ್ಯಮದಲ್ಲಿ ಕೆಲಸ ಮಾಡುವವರು ಸಂಚರಿಸಬಹುದು. ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದು. ಬಸ್‍ನಲ್ಲಿ ಪ್ರಯಾಣಿಸುವ ಎಲ್ಲರೂ ಕಡ್ಡಾಯವಾಗಿ ಐಡಿ ಕಾರ್ಡ್ ತೋರಿಸಬೇಕು. ಸಾಮಾನ್ಯ ಜನರಿಗೆ ಬಸ್‍ನಲ್ಲಿ ಸಂಚಾರ ನಡೆಸಲು ಅವಕಾಶವಿಲ್ಲ.

# ಕೋವಿಡ್ ನಿಯಮ ಪಾಲನೆ ಕಡ್ಡಾಯ: ಬಸ್ಸಿನ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಿಬ್ಬಂದಿಗಳು ಸ್ಯಾನಿಟೈಸರ್ ಬಳಕೆ ಮಾಡಬೇಕು, ಬಸ್ಸಿನಲ್ಲಿ ಸೀಟು ಇದ್ದರೆ ಮಾತ್ರ ಪ್ರಯಾಣಿಕರನ್ನು ಹತ್ತಿಸಿಕೊಳ್ಳಬೇಕು, ನಿಗದಿಪಡಿಸಿದ ಬಸ್ ನಿಲ್ದಾಣಗಳಲ್ಲಿ ಮಾತ್ರ ಬಸ್‍ಗಳನ್ನು ನಿಲ್ಲಿಸಬೇಕು, ಎಲ್ಲಾ ಪ್ರಯಾಣಿಕರ ಗುರುತಿನ ಚೀಟಿ ಪರಿಶೀಲನೆ ನಡೆಸಿಯೇ ಬಸ್‍ಗೆ ಹತ್ತಿಸಿಕೊಳ್ಳಬೇಕು. ವಾರಾಂತ್ಯದ ಕಫ್ರ್ಯೂ ಅವಧಿಯಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಇರಲಿದೆ. ಶನಿವಾರ ಮತ್ತು ಭಾನುವಾರ ಬೆಳಗ್ಗೆ 8ರಿಂದ ರಾತ್ರಿ 9ರ ತನಕ ಮಾತ್ರ ಮೆಟ್ರೋ ರೈಲು ಸಂಚರಿಸಲಿದೆ.

#ವಾರಾಂತ್ಯ ಕಫ್ರ್ಯೂ ಮಾರ್ಗಸೂಚಿ
ಎಲ್ಲಾ ಪಾರ್ಕ್‍ಗಳು ಬಂದ್ ಆಗಲಿವೆ: ಎಲ್ಲಾ ಸಾರ್ವಜನಿಕ ಉದ್ಯಾನಗಳು ಬಂದ್ ಆಗಿರುತ್ತವೆ, ಮಾಹಿತಿ ತಂತ್ರಜ್ಞಾನ ಉದ್ದಿಮೆಗಳು ಒಳಗೊಂಡಂತೆ ಎಲ್ಲಾ ಉದ್ದಿಮೆಗಳ ಕಾರ್ಯಾಚರಣೆಗೆ ವಾರಾಂತ್ಯದ ಕಫ್ರ್ಯೂ ಇಂದ ವಿನಾಯತಿ ಇದೆ, ನೌಕರರು ಆಯಾ ಸಂಘ, ಸಂಸ್ಥೆಗಳು ನೀಡುವ ಅಕೃತ ಗುರುತಿನ ಚೀಟಿಯನ್ನು ಹಾಜರುಪಡಿಸಿ ಸಂಚಾರ ನಡೆಸಬಹುದುದು.

ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು, ರೋಗಿಗಳನ್ನು ಕರೆದುಕೊಂಡು ಹೋಗುವವರು, ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳು ದಾಖಲೆ ತೋರಿಸಿ ಸಂಚರಿಸಬಹುದು.

# ಬೀದಿಬದಿ ವ್ಯಾಪಾರ- ಹೋಟೆಲ್‍ಗಳಲ್ಲಿ ಪಾರ್ಸೆಲ್‍ಗಳಿಗೆ ಅನುಮತಿ
ಬೇಕರಿ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತ್‍ಗಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸಹ ಅನುಮತಿ ನೀಡಲಾಗಿದೆ. ಸಾರ್ವಜನಿಕ ವಿತರಣೆಯ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿ ಇದೆ.

ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದಕ್ಕಾಗಿ 24*7 ಅವಯಲ್ಲಿ ಸಾಮಗ್ರಿಗಳನ್ನು ಮನೆಮನೆಗೆ ವಿತರಿಸಲು ಪ್ರೋತ್ಸಾಹಿಸಬೇಕು. ರೆಸ್ಟೋರೆಂಟ್ ಮತ್ತು ಹೋಟೆಲ್‍ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮಾತ್ರ ಅನುಮತಿ ಇದೆ.

# ರೈಲು, ವಿಮಾನ ಸಂಚಾರಕ್ಕೆ ಅನುಮತಿ:
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ಇದೆ. ವಿಮಾನ, ರೈಲುನಿ ಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ (ಕಂಪನಿಗಳು ನಿರ್ವಹಿಸುವ ಕ್ಯಾಬ್‍ಗಳು ಸೇರಿದಂತೆ) ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಆದರೆ ಪ್ರಯಾಣ ದಾಖಲೆ ಅಥವಾ ಟಿಕೆಟ್ ಪ್ರದರ್ಶಿಸಿದ ನಂತರ ಮತ್ತು ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಸಂಚಾರ ನಡೆಸಬೇಕು.
ವಿವಾಹ ಸಮಾರಂಭಗಳಿಗೆ 200 ಜನರ ಮಿತಿ: ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ಹೊರಾಂಗಣಗಳಲ್ಲಿ 200 ಜನರು ಮೀರದಂತೆ ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅವಕಾಶವಿದೆ. ಜನರು ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಜೊತೆಗೆ ಸರ್ಕಾರದ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಗೃಹ ಸಚಿವರ ಎಚ್ಚರಿಕೆ: ವಾರಾಂತ್ಯ ಕಫ್ರ್ಯೂ ಮಾರ್ಗಸೂಚಿಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ, ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ