ಮಂಗಳೂರು: ನಗರದ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟಿವಿ ನೋಡಲು ಬಂದ ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಬಂಧನ.
ಶಾಲೆ ಮುಗಿಸಿ ಟಿವಿ ನೋಡಲು ಮನೆಗೆ ಬಂದಿದ್ದ ಬಾಲಕಿಯ ಮೇಲೆ ನಿತೇಶ್ ರಿತಿನ್ (19) ಲೈಂಗಿಕ ಕಿರುಕುಳ ನೀಡಿದ್ದಾನೆ.ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ ಜೀವ ಬೆದರಿಕೆಯನ್ನು ಇಟ್ಟಿದ್ದಾನೆ ಎಂದು ತಿಳಿದುಬಂದಿದೆ.ಪ್ರಕರಣವನ್ನು ಐಪಿಸಿ ಸೆಕ್ಷನ್ 354 447 506 ಹಾಗೂ ಪೋಕ್ಸೋ ಕಾಯಿದೆಯ ಅಡಿಯಲ್ಲಿ ದಾಖಲು ಮಾಡಲಾಗಿದೆ.