ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇವಲ 15 ನಿಮಿಷ ಸಮಸ್ಯೆ ಎದುರಿಸಿದ್ದರು. ಆದರೆ, ರೈತರು ಒಂದು ವರ್ಷ ಪ್ರತಿಭಟಿಸಿದ್ದರು ಎಂದು ಪಂಜಾಬ್ ರಾಜ್ಯದ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರ ವ್ಯಂಗ್ಯವಾಡಿದ್ದಾರೆ.
ಪ್ರಧಾನಿ ಮೋದಿ ಭದ್ರತಾ ಲೋಪ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಧಾನ ಮಂತ್ರಿ ಸಾಹೇಬರ ಬಳಿ ಕೇಳು ಬಯಸುತ್ತಿದ್ದೇನೆ. ನಮ್ಮ ರೈತ ಸಹೋದರರು ದೆಹಲಿ ಗಡಿಯಲ್ಲಿ ಒಂದು ವರ್ಷದಿಂದ ಪ್ರತಿಭಟನೆ ನಡೆಸಿದ್ದರು. ಒಂದೂವರೆ ವರ್ಷ ಅಲ್ಲಿಯೇ ಮೊಕ್ಕಾಂ ಹೂಡಿದ್ದರು, ಈ ಬಗ್ಗೆ ನಿಮ್ಮ ಮಾಧ್ಯಮಗಳು ಏನನ್ನೂ ಹೇಳಲಿಲ್ಲ, ಆದರೆ, ನೀವು 15 ನಿಮಿಷ ಅನುಭವಿಸಿದ್ದ ಸಂಕಷ್ಟ ದೊಡ್ಡ ಸುದ್ದಿಯಾಗಿದೆ. ಈ ರೀತಿಯ ದ್ವಿಮುಖ ಧೋರಣೆ ಏಕೆ ಎಂದು ಪ್ರಶ್ನಿಸಿದ್ದಾರೆ.