Breaking News

ವಿಟ್ಲ: ಕೊರಗಜ್ಜನ ವೇಷ ಧರಿಸಿ ಕುಣಿದ ಮುಸ್ಲಿಂ ಮದುಮಗ: ಪ್ರಕರಣ ದಾಖಲಿಸಿದ ಪೊಲೀಸರು

Spread the love

ವಿಟ್ಲ: ಮುಸ್ಲಿಂ ಮದುಮಗನೊಬ್ಬ ತನ್ನ ಮದುವೆಯ ಸಂದರ್ಭದಲ್ಲಿ ಕೊರಗಜ್ಜನ ವೇಷ ಹಾಕಿ ಕುಣಿದಿದ್ದು ಈ ಸಂಬಂಧ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕೊಳ್ನಾಡು ಗ್ರಾಮದ ಅಝೀಝ್ ಅವರ ಪುತ್ರಿಯ ಜೊತೆ ಮಂಜೇಶ್ವರ ತಾಲೂಕಿನ ಉಪ್ಪಳದ ಉಮರುಲ್ಲಾ ಬಶೀತ್ ನ ಮದುವೆ ನಿಶ್ಚಿಯವಾಗಿತ್ತು.

ಇಂದು ಮಧ್ಯಾಹ್ನ ಇಬ್ಬರ ವಿವಾಹ ನಡೆದಿತ್ತು. ಇನ್ನು ಕಳೆದ ರಾತ್ರಿ ವರನ ಕಡೆಯವರು ವಧುವಿನ ಮನೆಗೆ ಬರುವ ಸಂದರ್ಭದಲ್ಲಿ ವರ ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ನೃತ್ಯ ಮಾಡು ಬಂದಿದ್ದಾನೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯುನ್ನುಂಟು ಮಾಡಲಾಗಿದೆ ಎಂದು ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 295ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ) ಮತ್ತು 153ಎ (ಧರ್ಮದ ಆಧಾರದ ಮೇಲೆ ಅಸಂಗತತೆ, ದ್ವೇಷ ಅಥವಾ ದ್ವೇಷದ ಭಾವನೆಗಳನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಹಿಂದೂ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ವಧುವಿನ ಮನೆಗೆ ಘೇರಾವ್ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು


Spread the love

About Laxminews 24x7

Check Also

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

Spread the loveಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ