Breaking News

1-9 ನೇ ತರಗತಿ ಮಕ್ಕಳಿಗೆ ‘ವಿದ್ಯಾಗಮ’ ಮಾದರಿಯಲ್ಲಿ ಬೋಧನೆ ಮಾಡುವಂತೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ಯಿಂದ ಸುತ್ತೋಲೆ

Spread the love

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ರೆ ವಿದ್ಯಾಗಮ ಯೋಜನೆ ಜಾರಿಗೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

 

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಶಾಲೆಗಳಲ್ಲಿ ಭೌತಿಕ ತರಗತಿಗಳು ಬಂದ್ ಆಗಿದೆ.

ಈ ಹಿನ್ನೆಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ( ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ) ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ಪೂರ್ವ ಪ್ರಾಥಮಿಕ, ಎಲ್ ಕೆ ಜಿ ಹಾಗೂ ಯುಕೆಜಿ ಹಾಗೂ 1 ರಿಂದ 9 ನೇ ತರಗತಿವರೆಗೆ ಜ.19 ರವರೆಗೆ ಭೌತಿಕ ತರಗತಿ ಸ್ಥಗಿತಗೊಳಿಸಲು ತಿಳಿಸಲಾಗಿದೆ. ಆದರೆ ಈ ಅವಧಿಯಲ್ಲಿ ಶನಿವಾರದಂದು ಯಾವುದೇ ಕಾರಣಕ್ಕೂ ಶಾಲೆಗಳನ್ನು ನಡೆಸದಿರಲು ತಿಳಿಸಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗಿ ರಜೆ ಘೋಷಿಸಿದರೆ ವಿದ್ಯಾಗಮ ಯೋಜನೆಯನ್ನು ಅನುಷ್ಟಾನಗೊಳಿಸಲು ಸೂಚನೆ ನೀಡಿದೆ. . ಈ ಸಂಬಂಧ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಎಲ್ಲಾ ಬಿಇಒ ಮತ್ತು ಉಪನಿರ್ದೇಶಕರಿಗೆ ಸುತ್ತೋಲೆ ಹೊರಡಿಸಲಾಗಿದೆ. ವಿದ್ಯಾಗಮ ಮಾದರಿಯಲ್ಲಿ ಬೋಧನೆ ಮಾಡುವಂತೆ ಸುತ್ತೋಲೆ ಹೊರಡಿಸಲಾಗಿದೆ.

 

ಹೌದು. ರಾಜ್ಯದಲ್ಲಿ ಶಾಲೆಗಳಿಗೆ ರಜೆ ನೀಡಿದರೆ ವಿದ್ಯಾಗಮ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಯೋಜನೆಯ ಜಾರಿಗೆ ರೂಪುರೇಷೆ ಸಿದ್ದಪಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗಿ ರಜೆ ಘೋಷಿಸಿದರೆ ವಿದ್ಯಾಗಮ ಯೋಜನೆಯನ್ನು ಅನುಷ್ಟಾನಗೊಳಿಸಲಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಎಲ್ಲಾ ಬಿಇಒ ಮತ್ತು ಉಪನಿರ್ದೇಶಕರಿಗೆ ಸುತ್ತೋಲೆ ಹೊರಡಿಸಲಾಗಿದೆ. ವಿದ್ಯಾಗಮ ಮಾದರಿಯಲ್ಲಿ ಬೋಧನೆ ಮಾಡುವಂತೆ ಸುತ್ತೋಲೆ ಹೊರಡಿಸಲಾಗಿದೆ.


Spread the love

About Laxminews 24x7

Check Also

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

Spread the loveಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ