Breaking News

ಜಮೀನು ಪತ್ರವನ್ನು ರಿಜಿಸ್ಟರ್ ಮಾಡಲು ಲಂಚಕ್ಕಾಗಿ ಬೇಡಿಕೆ : ಸಬ್​ರಿಜಿಸ್ಟರ್​ಗೆ 4 ವರ್ಷ ಶಿಕ್ಷೆ

Spread the love

 

ತುಮಕೂರು: ಜಮೀನಿನ ದಾನ ಪತ್ರವನ್ನು ರಿಜಿಸ್ಟರ್ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಮಧುಗಿರಿ ಸಬ್ ರಿಜಿಸ್ಟರ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಆರೋಪಿಗೆ ಕೋರ್ಟ್​ 4 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

 

ಸಬ್​ ರಿಜಿಸ್ಟರ್​ ರಾಮಚಂದ್ರಯ್ಯ ಎಂಬುವರಿಗೆ ತುಮಕೂರಿನ 7ನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4 ವರ್ಷ ಕಠಿಣ ಸಜೆ ಹಾಗೂ 8ಸಾವಿರ ರೂ. ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

ಮಧುಗಿರಿ ತಾಲೂಕು ಚಿಕ್ಕ ಹೊಸಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಜಮೀನಿನ ದಾನ ಪತ್ರವನ್ನು ರಿಜಿಸ್ಟರ್ ಮಾಡಲು ಸಬ್ ರಿಜಿಸ್ಟರ್ 4000 ಲಂಚಕ್ಕಾಗಿ ಬೇಡಿಕೆ ಇರಿಸಿದ್ದರು. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ರಘುಕುಮಾರ್ ಪ್ರಕರಣ ದಾಖಲಿಸಿಕೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಎಸ್ ಸುಧೀಂದ್ರ ನಾಥ್ ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ