Breaking News

ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಪಡೆಯಬೇಕೆ? ಅರ್ಹತಾ ಮಾನದಂಡವೇನು?

Spread the love

 ಮುದ್ರಾ ಯೋಜನಾಯನ್ನು ಪ್ರತಿಯೊಬ್ಬರು ಕೇಳಿರಬಹುದು. ಅವುಗಳ ಸಂಕ್ಷಿಪ್ತವಾದ ವಿವರಗಳಿಗಾಗಿ ಹುಡುಕಾಟ ನಡೆಸಿದ್ದೀರಾ? ಈ ಯೋಜನೆಯಿಂದ ಏನ್‌ ಉಪಯೋಗ..? ಹೇಗೆ ಸಾಲ ಪಡೆಯುವುದು..?

ಅದಕ್ಕೆ ಬೇಕಾದ ಮಾನದಂಡವೇನು..? ಅನ್ನೋದರ ಬಗ್ಗೆ ಯೋಚಿಸುತ್ತೀರಾ.. ಹಾಗಿದ್ದರೆ ಇಲ್ಲಿದೆ ನಿಮಗೆ ಸಂಪೂರ್ಣ ಮಾಹಿತಿ.

ಪ್ರಧಾನ ಮಂತ್ರಿ ಮುದ್ರಾ ಯೋಜನಾ (PMMY) ಎಂಬುದು ಆಗಸ್ಟ್ 8, 2015ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ಯೋಜನೆ. ಕಾರ್ಪೊರೇಟರರ ಹೊರತಾಗಿ, ಕೃಷಿ ವಲಯಕ್ಕೆ ಅಲ್ಲದೆ ಸಣ್ಣ/ಕಿರು ಸಂಸ್ಥೆಗಳಿಗೆ 10 ಲಕ್ಷ ರೂಪಾಯಿ ತನಕ ಸಾಲ ನೀಡುವಂಥ ಯೋಜನೆ ಇದು. ಇವುಗಳನ್ನು ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಮುದ್ರಾ ಸಾಲಗಳು ಎಂದು ವರ್ಗೀಕರಿಸಲಾಗುತ್ತದೆ. ಈ ಸಾಲಗಳನ್ನು ವಾಣಿಜ್ಯ ಬ್ಯಾಂಕ್​ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್​ಗಳು, ಸಣ್ಣ ಹಣಕಾಸು ಬ್ಯಾಂಕ್​ಗಳು, ಕೋ ಆಪರೇಟಿವ್ ಬ್ಯಾಂಕ್​ಗಳು, ಕಿರು ಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಮೂಲಕವಾಗಿ ವಿತರಿಸಲಾಗುತ್ತದೆ. ಈ ಮೇಲ್ಕಂಡ ಯಾವ ಸಂಸ್ಥೆಯನ್ನಾದರೂ ಸಾಲಕ್ಕಾಗಿ ಮನವಿ ಮಾಡಿಕೊಳ್ಳಬಹುದು, ಇಲ್ಲದಿದ್ದರೆ ಪೋರ್ಟಲ್ ಮೂಲಕ ಆನ್​ಲೈನ್​ನಲ್ಲಿ ಅಪ್ಲೈ ಮಾಡಬಹುದು.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ