Breaking News

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ; ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆದ ಮಾಜಿ ಸಿಎಂ

Spread the love

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಜ್ವರದಿಂದ ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆದ ಘಟನೆ ನಡೆದಿದೆ.

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಇಂದು ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ದೊರೆತಿದೆ.

ಪಾದಯಾತ್ರೆಯಲ್ಲಿ ಭಾಗವಹಿಸಿ ಕೆಲ ದೂರ ಸಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಹೆಚ್ಚಿದ್ದು, ಪಾದಯಾತ್ರೆ ಬಿಟ್ಟು ಕಾರಿನಲ್ಲಿ ಹೆಗ್ಗನೂರು ಗ್ರಾಮಕ್ಕೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ.

ಈ ನಡುವೆ ಸಿದ್ದರಾಮಯ್ಯನವರಿಗೆ ಜ್ವರ ತೀವ್ರವಾಗಿರುವುದರಿಂದ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಿದ್ದರಾಮಯ್ಯ ಕೋವಿಡ್ ಬೂಸ್ಟರ್ ಡೋಸ್ ಹಾಕಿಸಿಕೊಂಡಿದ್ದರು. ಬೂಸ್ಟರ್ ಡೋಸ್ ಪಡೆದ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಮಾಜಿ ಸಿಎಂ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ