Breaking News

ಹಾಲಿನಂತೆ ಧುಮ್ಮಕ್ಕುವ ಅಣಶಿ ಜಲಪಾದದ ನರ್ತನ ನೋಡಿ ಪ್ರವಾಸಿಗರು ಮಾರು ಹೋಗದಿದ್ದಾರೆ.

Spread the love

ಕಾರವಾರ: ಮಳೆಗಾಲ ಮುಗಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯ ಹಸಿರು ಕಾನನಗಳ ಮಧ್ಯೆ ಜಲಪಾತಗಳಿಗೇನೂ ಕಮ್ಮಿ ಇಲ್ಲ. ಅದೇ ರೀತಿ ಇದೀಗ ಬಂಡೆಗಳನ್ನು ಸೀಳಿಕೊಂಡು ಹಾಲಿನಂತೆ ಧುಮ್ಮಕ್ಕುವ ಅಣಶಿ ಜಲಪಾದದ ನರ್ತನ ನೋಡಿ ಪ್ರವಾಸಿಗರು ಮಾರು ಹೋಗದಿದ್ದಾರೆ.

ರಸ್ತೆ ಪಕ್ಕದಲ್ಲೇ ಇರುವುದರಿಂದ ಪ್ರವಾಸಿಗರಿಗೆ ಎಂಜಾಯ್ ಮಾಡಲು ಇನ್ನೂ ಅನುಕೂಲವಾಗಿದೆ.ಜಿಲ್ಲೆಯ ಕಾರವಾರ-ಜೋಯಿಡಾ ಘಟ್ಟ ಪ್ರದೇಶದ ಅಣಶಿ ಬಳಿ ಮಳೆ ನಿಲ್ಲುತಿದ್ದಂತೆ ಜಲಪಾತ ದುಮ್ಮಿಕ್ಕಿ ಹರಿಯುತಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಕಾರವಾರದಿಂದ 40 ಕಿಲೊಮೀಟರ್ ನಷ್ಟು ದೂರದ ಅಣಶಿಯ ಅಭಯಾರಣ್ಯದಲ್ಲಿ ದುಮ್ಮಿಕ್ಕಿ ಹರಿಯುವ ಈ ಜಲಪಾತ ಮಳೆಗಾಲದಿಂದ ಪ್ರಾರಂಭವಾಗಿ ಬೇಸಿಗೆಯ ಒಂದು ತಿಂಗಳ ಕಾಲ ದಟ್ಟ ಕಾಡಿನ ನಡುವಿನ ಬಂಡೆಕಲ್ಲುಗಳ ಮಧ್ಯದಲ್ಲಿ ಹಾಲಿನಂತೆ ಭೋರ್ಗರೆದು ಹರಿಯುತ್ತದೆ.

ರಸ್ತೆ ಪಕ್ಕದಲ್ಲೇ ಇರುವುದರಿಂದ ಪ್ರವಾಸಿಗರು ವಾಹನಗಳನ್ನು ನಿಲ್ಲಿಸಿ, ಜಲಪಾತ ವೀಕ್ಷಿಸಿ ಮುಂದೆ ಸಾಗುತ್ತಾರೆ. ಹೆಚ್ಚು ಸಮಯವಿದ್ದರೆ ಜಲಪಾತದಲ್ಲೇ ಮಿಂದೇಳುತ್ತಾರೆ. ಇದನ್ನು ಗಮನಿಸಿದ ಅರಣ್ಯ ಇಲಾಖೆ ಅಗತ್ಯ ಸೌಲಭ್ಯ ನೀಡುವ ಮೂಲಕ ಪ್ರವಾಸಿಗರ ವೀಕ್ಷಣೆಗಾಗಿ ವ್ಯವಸ್ಥೆ ಕಲ್ಪಿಸಿದೆ. ರಸ್ತೆಯ ಪಕ್ಕದಲ್ಲೇ ಹರಿಯುವುದರಿಂದ ಪ್ರವಾಸಿಗರ ದಂಡೇ ಹರಿದುಬರುತಿದ್ದು, ಈ ಚಿಕ್ಕ ಫಾಲ್ಸ್ ನೋಡಿ ಜನ ಎಂಜಾಯ್ ಮಾಡುತಿದ್ದಾರೆ.


Spread the love

About Laxminews 24x7

Check Also

ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ

Spread the loveನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ