ಸಿರಿಗೆರೆ: ಸಮೀಪದ ಕೋಣನೂರು ಗ್ರಾಮದಲ್ಲಿ ಡಿ.25ರಂದು ಪತ್ನಿಯನ್ನು ಕೊಲೆ ಮಾಡಿ ಮಂಚದ ಕೆಳಗೆ ಹೂತಿಟ್ಟಿದ್ದ ಪ್ರಕರಣ ಸಂಬಂಧ ಪತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕೊಣನೂರು ಗ್ರಾಮದ ಆರ್. ನಾರಪ್ಪ (40) ಬಂಧಿತ. ಈತ ತನ್ನ ಪತ್ನಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಬೆಣ್ಣೆಹಳ್ಳಿ ಗ್ರಾಮದ ಸುಮಾ (26) ಅವರನ್ನು ಕೊಲೆ ಮಾಡಿದ್ದ.
ಶವ ಪತ್ತೆಯಾದ 24 ಗಂಟೆಯೊಳಗೆ ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಡಿವೈಎಸ್ಪಿ ತಂಡ ಆರೋಪಿಯನ್ನು ಮಹಜರು ಮಾಡಲು ಕೋಣನೂರು ಗ್ರಾಮಕ್ಕೆ ಕರೆತಂದಿತು. ಕೊಲೆ ಮಾಡಿದ ಸಂದರ್ಭದಲ್ಲಿ ಬಳಸಿದ ಪರಿಕರಗಳ ಮಾಹಿತಿ ಪಡೆದು ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಆರೋಪಿಯನ್ನು ಪೊಲೀಸರು ಗ್ರಾಮಕ್ಕೆ ಕರೆತಂದಾಗ ಗ್ರಾಮಸ್ಥರು ಆರೋಪಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಮರಣದಂಡನೆ ಜಾರಿಯಾಗ
ಬೇಕು ಎಂದು ಮಹಿಳೆಯರು ಶಪಿಸುತ್ತಿದ್ದ ದೃಶ್ಯ ಕಂಡುಬಂದಿತು. 24 ಗಂಟೆಯೊಳಗೆ ಬಂಧಿಸಿದ ಪೊಲೀಸರಿಗೂ ಮೆಚ್ಚುಗೆ ವ್ಯಕ್ತಪಡಿಸಿದರು.
Laxmi News 24×7