ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,79,723 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,79,723 ಕೊರೊನಾ ಕೇಸ್ ಪತ್ತೆಯಾಗಿದ್ದು, 146 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 483,936 ಏರಿಕೆಯಾಗಿದೆ.