ರಾಮನಗರ : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 31 ಮಂದಿ ವಿರುದ್ದ ಎಫ್‌ಐಆರ್ ದಾಖಲು ಮಾಡಲಾಗಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಮೇಕೆದಾಟುನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ವಿಪತ್ತು ನಿರ್ವಹಣಾ ಕಾಯಿದೆ 2005ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.