ಧಾರವಾಡ: ಹಾಡಿದ್ದೇ ಹಾಡೋ ಕಿಸಬಾಯಿದಾಸ ಅಂತಾರಲ್ಲ ಹಾಗೆ ಸಿದ್ದರಾಮಯ್ಯ ಹೇಳಿದ್ದೇ ಹೇಳುತ್ತಾರೆ. ಅದೇ ಟಿಪ್ಪು ಸುಲ್ತಾನ್ ವರ್ಣನೆ ಮಾಡುತ್ತಾರೆ. ಅದು ಬಿಟ್ಟರೆ ಬೇರೆ ಗೊತ್ತಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದರು.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ನಿರ್ಲಕ್ಷ್ಯ ವಿಚಾರ ಚರ್ಚಿಸಲು ಕೊನೆಗೆ ಎರಡು ದಿನ ಕೊಟ್ಟರು. ಮುಂದಿನ ಅಧಿವೇಶನದಲ್ಲಿ ಮೊದಲೇ ನಾಲ್ಕು ದಿನ ಕೊಡಬೇಕು. ಈ ಕುರಿತ ಚರ್ಚೆಗೆ ಮೊದಲೇ ಸಮಯ ಕೊಡುವಂತೆ ಸಭಾಪತಿ ಬಳಿ ಕೇಳಿದ್ದೇನೆ ಎಂದು ಅವರು ಹೇಳಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸದನದ ಸಮಯ ಹಾಳು ಮಾಡಿದೆ. ಅವರು ಉತ್ತರ ಕರ್ನಾಟಕದ ಚರ್ಚೆಯಾಗದಂತೆ ಮಾಡಿದ್ದಾರೆ. ಸಿದ್ದರಾಮಯ್ಯ ಎಂಟೆಂಟು ತಾಸು ಮಾತನಾಡುತ್ತಾರೆ. ಅವರ ಶಾಸಕರಿಗೂ ಅವಕಾಶ ಕೊಡೋದಿಲ್ಲ, ಇದು ದುರಂತ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಹಾಡಿದ್ದೇ ಹಾಡೋ ಕಿಸಬಾಯಿದಾಸ ಅಂತಾರಲ್ಲ ಹಾಗೆ ಸಿದ್ದರಾಮಯ್ಯ ಹೇಳಿದ್ದೇ ಹೇಳುತ್ತಾರೆ. ಅದೇ ಟಿಪ್ಪು ಸುಲ್ತಾನ್ ವರ್ಣನೆ ಮಾಡುತ್ತಾರೆ. ಅದು ಬಿಟ್ಟರೆ ಬೇರೆ ಗೊತ್ತಿಲ್ಲ’ ಎಂದರು.