ಬೆಂಗಳೂರು: ಮಹಿಳೆಗೆ ವಿಡಿಯೋ ಕಾಲ್ ಮಾಡಿ ಅಶ್ಲೀಲ ದೃಶ್ಯ ತೋರಿಸಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ನಗರದ ಮಾರುತಿ ಬಂಧಿತ ಆರೋಪಿ ಆಗಿದ್ದು, ದಿನಸಿ ಅಂಗಡಿ ನಡೆಸುತ್ತಿದ್ದ ಮಹಿಳೆಯಿಂದ ಮೊಬೈಲ್ ನಂಬರ್ ಪಡೆದಿದ್ದ ಆರೋಪಿ, ಆಗಾಗ ಪ್ರಾವಿಜನ್ ಸ್ಟೋರ್ಗೆ ಬರುತ್ತಿದ್ದ.
25 ವರ್ಷದ ಮಹಿಳೆಗೆ ವಿಡಿಯೋ ಕಾಲ್ ಮುಖಾಂತರ ಖಾಸಗಿ ಅಂಗ ತೋರಿಸದ್ದ. ಈ ಬಗ್ಗೆ ಮಹಿಳೆ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ದೂರಿನ ಅನ್ವಯ ವಿಚಾರಣೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.