ಬೆಂಗಳೂರು: ಜನವರಿ 19ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಮಾರ್ಗಸೂಚಿ ಜಾರಿಯಲ್ಲಿದ್ದು, ಅದನ್ನು ತಿಂಗಳಾಂತ್ಯದವರೆಗೂ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಧಿಕಾರಿಗಳು ಹಾಗು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು. ಈ ವೇೆಳೆ, ಸದ್ಯ ರಾಜ್ಯದಲ್ಲಿ ಕೈಗೊಂಡಿರುವ ಕಠಿಣ ನಿರ್ಬಂಧಗಳನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಕುರಿತು ಸಮಾಲೋಚನೆ ನಡೆಸಲಾಯಿತು. ಕೆಲವೊಂದು ಹೆಚ್ಚುವರಿ ನಿರ್ಬಂಧ ಸೇರಿಸಿ ಮಾರ್ಗಸೂಚಿಯನ್ನು ಜನವರಿ ಅಂತ್ಯದವರೆಗೂ ವಿಸ್ತರಣೆ ಮಾಡುವ ಮಹತ್ವದ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
Laxmi News 24×7