ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಜಕೀಯ ಕಣಕ್ಕೆ ಇಳಿಯುವ ಮೂಲಕ ಅವರು, ತಮ್ಮ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಹಾಗೂ ಗಣ್ಯರ ಸಮ್ಮುಖದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದರು.
ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ರಾಜ್ಯದಲ್ಲಿ ಡಿಸಿಪಿ ಮತ್ತು ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.
ಸ್ವಯಂನಿವೃತ್ತಿ ಪಡೆದುಕೊಂಡಿದ್ದ ಅವರು, ರಾಜಕೀಯಕ್ಕೆ ಬರುವುದಾಗಿ ಈ ಹಿಂದೆ ಹೇಳಿದ್ದರು. ಸದ್ಯ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಷ್ಟ್ರೀಯವಾದಿ ಪಕ್ಷವಾಗಿದೆ. ನಾನು ರಾಷ್ಟ್ರೀಯವಾದಿಯಾಗಿದ್ದೇನೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಪಕ್ಷ ಸಂಘಟನೆ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ
Laxmi News 24×7