Breaking News

ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Spread the love

ಬೆಂಗಳೂರು: ನಿವೃತ್ತ  ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.  ರಾಜಕೀಯ ಕಣಕ್ಕೆ ಇಳಿಯುವ ಮೂಲಕ ಅವರು, ತಮ್ಮ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್  ಹಾಗೂ ಗಣ್ಯರ ಸಮ್ಮುಖದಲ್ಲಿ  ಅಣ್ಣಾಮಲೈ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದರು.

ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ರಾಜ್ಯದಲ್ಲಿ ಡಿಸಿಪಿ ಮತ್ತು ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.
ಸ್ವಯಂನಿವೃತ್ತಿ ಪಡೆದುಕೊಂಡಿದ್ದ ಅವರು, ರಾಜಕೀಯಕ್ಕೆ ಬರುವುದಾಗಿ  ಈ ಹಿಂದೆ ಹೇಳಿದ್ದರು. ಸದ್ಯ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಷ್ಟ್ರೀಯವಾದಿ ಪಕ್ಷವಾಗಿದೆ. ನಾನು ರಾಷ್ಟ್ರೀಯವಾದಿಯಾಗಿದ್ದೇನೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಪಕ್ಷ ಸಂಘಟನೆ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ