ಮೂಡಲಗಿಯಲ್ಲಿ ಅವಳಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು.
ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅವಳಿ ತಾಲೂಕುಗಳಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ಪ್ರಸಕ್ತ ಸನ್ನಿವೇಶದಲ್ಲಿ ಇಳಿಮುಖವಾಗಿದ್ದರೂ ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಳವಾಗಬಹುದು.
ಇದರಿಂದ ನಾಗರೀಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಆದ್ದರಿಂದ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಈಗಿನಿಂದಲೇ ಅವಶ್ಯಕವಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ಮತ್ತು ಎರಡನೇ ಲಸಿಕೆ ಹಾಕುವ ಕಾರ್ಯಕ್ರಮ ಮುಂದುವರೆದಿದ್ದು, ಎರಡೂ ಲಸಿಕೆ ಹಾಕುವ ಅಭಿಯಾನವನ್ನು ಶೇ 100 ರಷ್ಟು ಯಶಸ್ವಿ ಮಾಡುವಂತೆ ಸೂಚನೆ ನೀಡಿದರು.