ನವದೆಹಲಿ: ಸುಪ್ರೀಂಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 150 ಮಂದಿ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 32 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ನಾಲ್ವರಿಗೆ ಪಾಸಿಟಿವ್ ಪತ್ತೆಯಾಗಿದೆ.
ಇಬ್ಬರಿಗೆ ಗುರುವಾರವೇ ಸೋಂಕು ಕಾಣಿಸಿಕೊಂಡಿತ್ತು.
ಇತ್ತೀಚೆಗೆ ನಿವೃತ್ತರಾದ ನ್ಯಾಯಮೂರ್ತಿ ಆರ್.ಸುಬ್ಬಾಶ್ ರೆಡ್ಡಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗಿಯಾಗಿದ್ದ ನಾಲ್ವರು ನ್ಯಾಯಮೂರ್ತಿಗಳಿಗೆ ಪಾಸಿಟಿವ್ ದೃಢಪಟ್ಟಿದೆ.